ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಇರುವ ದಾಖಲೆಗಳು ಕಳ್ಳತನವಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬಹಳಷ್ಟು ಚರ್ಚೆಗೆ ಗ್ರಾಸವಾದ ರಫೇಲ್ ಡೀಲ್ ಬಗ್ಗೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ರಫೇಲ್ ಒಪ್ಪಂದದ ದಾಖಲೆಗಳು ಕಳ್ಳತನವಾಗಿವೆ. ಅದನ್ನು ತೋರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದೆ.
ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂಕೋರ್ಟ್ ನ ಅರ್ಜಿಯ ಮರು ವಿಚಾರಣೆಗೆ ಕೋರಿದ್ದರು.
ಅಷ್ಟೇ ಅಲ್ಲದೇ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ನಲ್ಲಿ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದಲ್ಲಿ ಅರ್ಜಿ ವಿಚಾರಣೆ ನಡೆದಿದೆ.