Tuesday, January 21, 2025
ಸುದ್ದಿ

ಬೇಲೂರಿನಲ್ಲಿ ಅರಣ್ಯದಿಂದ ಕಾಫಿ ತೋಟಕ್ಕೆ ಬಂದ ಕಾಡಾನೆಗಳು – ಕಹಳೆ ನ್ಯೂಸ್

ಬೇಲೂರು: ಅರಣ್ಯದಿಂದ ಬಂದ ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು ಅರಣ್ಯ ಸಿಬ್ಬಂದಿ ಕಾಡಿಗೆ ಅಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಅರಣ್ಯದಿಂದ ಬಂದ ಎರಡು ಕಾಡಾನೆಗಳು ಬೇಲೂರು ತಾಲೂಕಿನ ಹೋಬಳಿ ಗಬ್ಬಲಗೋಡು, ದಬ್ಬೆ, ಮತ್ತಿಹಳ್ಳಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿವೆ. ಇದನ್ನು ನೋಡಿದ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆನೆ ಸುಮಾರು 25 ವರ್ಷದಾಗಿದ್ದು, ಜತೆಗೊಂದು ಮರಿಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಈ ಆನೆಗಳು ಗಬ್ಬಲಗೋಡು, ಮತ್ತಿಹಳ್ಳಿ, ಹಾಗೂ ದಬ್ಬೆ ಗ್ರಾಮಗಳ ಕಾಫಿ ತೋಟಗಳಲ್ಲಿ ಓಡಾಡುತ್ತಾ ಕಾಫಿ, ಬಾಳೆ ಇನ್ನಿತರ ಬೆಳೆಗಳನ್ನು ನಾಶಪಡಿಸುತ್ತಿದ್ದು, ಇದರಿಂದ ತೋಟದಲ್ಲಿ ಕೆಲಸ ಮಾಡಲು ಕಾರ್ಮಿಕರು ಭಯಪಡುವಂತಾಗಿದೆ.

ಈ ಕುರಿತಂತೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಮರಿಸ್ವಾಮಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಸುಭಾಷ್ ಚಂದ್ರ, ಗುರುರಾಜ್, ಸಂತೋಷ ಕುಮಾರ್ ಇದ್ದರು.