ಮಂಗಳೂರು: ಟ್ಯೂಶನ್‌ಗೆಂದು ತೆರಳಿ ನಾಪತ್ತೆಯಾಗಿದ್ದ ನಗರದ ಕೃಷ್ಣಾಪುರದ ತನ್ವೀರ್ ,ತನ್ವೀಝ್ ಇಬ್ಬರು ಬಾಲಕರು ಗೋವಾದಲ್ಲಿ ನಿನ್ನೆ ಪತ್ತೆಯಾಗಿದ್ದಾರೆ. ಮಕ್ಕಳನ್ನು ಕರೆತರಲು ಪೋಷಕರ ಜೊತೆಗೆ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಗೋವಾಕ್ಕೆ ಕಳುಹಿಸಿಕೊಡಲಾಗಿದೆ.
ಮಕ್ಕಳನ್ನು ಕರೆತರುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ.ಪ್ರತಿದಿನ ಟ್ಯೂಶನ್‌ಗೆ ತೆರಳಿ ಅಲ್ಲಿಂದ ಮದರಸಕ್ಕೆ ಹೋಗಿ ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುತ್ತಿದ್ದರು. ಆದರೆ ನಿನ್ನೆ ಸಂಜೆ ಟ್ಯೂಶನ್‌ಗೆ ತೆರಳಿದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು.
ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ವಿದ್ಯಾರ್ಥಿಗಳಿಬ್ಬರು ಗೋವಾದ ಮಡಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದರು.