ಬೆಂಗಳೂರು: ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರೇಷ್ಮೆ ಬೆಳೆಗಾರರೊಂದಿಗೆ ಸಭೆ ನಡೆಸಿದ್ದಾರೆ. ರೇಷ್ಮೆ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಸಿಎಂ ಸಭೆಯಲ್ಲಿ ಭರವಸೆ ನೀಡಿದ್ದಾರೆ.
ರೇಷ್ಮೆ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಅವರು ಹೇಳಿದ್ದಾರೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೈತರ ಸಮಿತಿಯನ್ನು ರಚಿಸಲಿದ್ದು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ರೈತರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದು ಇವುಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ.