ಕಡಬ: ಬುಧವಾರ ಬೆಳಿಗ್ಗೆ ಕಾಲೇಜಿಗೆಂದು ಮನೆಯಿಂದ ತೆರಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.
ನಾಪತ್ತೆಯಾಗಿರುವ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಜಾಣಮನೆ ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಬುಧವಾರದಂದು ಕಾಲೇಜಿನಿಂದ ಕಡಬಕ್ಕೆ ಹಿಂತಿರುಗಿದ್ದು, ಆ ಬಳಿಕ ಮನೆಗೆ ತೆರಳದೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಗುರುವಾರದಂದು ಆತನ ತಂದೆ ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.