ರಾಮಜನ್ಮಭೂಮಿ ವಿವಾದ, ಒಂದು ವಾರದಲ್ಲಿ ರಾಜೀ ಸಂಧಾನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು: ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್
ನವದೆಹಲಿ: ಹಲವು ದಶಕಗಳಿಂದ ಪರಿಹಾರ ಕಾಣದ ಸಮಸ್ಯೆಯಾಗಿರುವ ರಾಮಜನ್ಮಭೂಮಿ ವಿವಾದಕ್ಕೆ ಇದೀಗ ತಾರ್ಕಿಕ ಅಂತ್ಯವೊಂದು ಲಭಿಸುವ ಸೂಚನೆ ಸಿಕ್ಕಿದೆ. ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ದೇಶದ ಉಚ್ಛ ನ್ಯಾಯಾಲಯದ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ.
ಕಾಲಮಿತಿಯಲ್ಲಿ ರಾಮ ಜನ್ಮಭೂಮಿ – ಬಾಬರಿ ಮಸೀದಿ ಜಮೀನು ವಿವಾದವನ್ನು ಸಂಧಾನ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.
ಉತ್ತರಪ್ರದೇಶದ ಫೈಸಲಾಬಾದ್ ನಲ್ಲಿ ಈ ಸಂಧಾನ ಪ್ರಕ್ರಿಯೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ನ್ಯಾಯಾಲವು ತಾನು ನಿಯಮಿಸುವ ಸಂಧಾನಕಾರರ ನೇತೃತ್ವದಲ್ಲಿ ಮತ್ತು ತನ್ನ ನಿಗಾವಹಣೆಯಲ್ಲಿ ಈ ಪ್ರಕ್ರಿಯೆ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ.
ಒಂದು ವಾರದಲ್ಲಿ ರಾಜೀ ಸಂಧಾನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದೂ ಸಹ ಸಾಂವಿಧಾನಿಕ ಪೀಠವು ತನ್ನ ಆದೇಶದಲ್ಲಿ ಹೇಳಿದೆ.