Monday, January 20, 2025
ಸುದ್ದಿ

ಅರಣ್ಯವಾಸಿಗಳ ರೋಧನಕ್ಕೆ ಸ್ಪಂದಿಸಿದ ಬೆಳ್ತಂಗಡಿ ಶಾಸಕ – ಕಹಳೆ ನ್ಯೂಸ್

ಬೆಳ್ತಂಗಡಿ: ಅರಣ್ಯ ಹಕ್ಕು ಕಾಯ್ದೆಯನ್ವಯ ಅರಣ್ಯ ಹಕ್ಕು ಪತ್ರ ಪಡೆಯದೆ ಇರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲು ಸುಪ್ರೀಂಕೋರ್ಟ್ ಆದೇಶವನ್ನು ನೀಡಿದ್ದು ಆತಂಕಕ್ಕೆ ಕಾರಣವಾಗಿತ್ತು. ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಮತ್ತು ಮಾಹಿತಿಯ ಕೊರತೆಯಿಂದ ಅರಣ್ಯವಾಸಿಗಳು ಹಕ್ಕು ಪತ್ರ ಪಡೆದಿಲ್ಲ ಹಾಗಾಗಿ ಕಾಯ್ದೆಯ ಅನುಷ್ಠಾನಕ್ಕೆ ಕಾಲಾವಕಾಶ ಕೋರಿದ ಪರಿಣಾಮ ಸರ್ವೋಚ್ಚ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ .

ಬೆಳ್ತಂಗಡಿ ತಾಲೂಕಿನಲ್ಲಿ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜರವರು ಅಧಿಕಾರಿಗಳು, ಅರಣ್ಯ ಹಕ್ಕು ಸಮಿತಿ ಸದಸ್ಯರು ಮತ್ತು ಅರಣ್ಯವಾಸಿಗಳ ಸಭೆಯನ್ನು ನಡೆಸಿ ಸಂಪನ್ಮೂಲ ವ್ಯಕ್ತಿಗಳಿಂದ ಕಾಯ್ದೆಯ ಬಗ್ಗೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಲು ಕ್ರಮ ಕೈ ಗೊಂಡಿದ್ದಾರೆ. ಮಾರ್ಚ್ 11 ರಂದು ಬೆಳಿಗ್ಗೆ 10-30 ಕ್ಕೆ ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು