Monday, January 20, 2025
ಕ್ರೀಡೆಸುದ್ದಿ

ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ: ಭಾರತ ಫೀಲ್ಡಿಂಗ್ ಆಯ್ಕೆ – ಕಹಳೆ ನ್ಯೂಸ್

ರಾಂಚಿ : ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ಎದುರಾಳಿ ಆಸ್ಟ್ರೇಲಿಯ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಭಾರತ ಎರಡನೇ ಏಕದಿನ ಪಂದ್ಯದಲ್ಲಿ 8 ರನ್‌ನಿಂದ ರೋಚಕ ಜಯ ಸಾಧಿಸಲು ನೆರವಾಗಿದ್ದ ತಂಡವನ್ನೇ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳಪೆ ಫಾರ್ಮ್‌ನಲ್ಲಿರುವ ಶಿಖರ್ ಧವನ್ ಮತ್ತೊಂದು ಅವಕಾಶ ಪಡೆದಿದ್ದಾರೆ. ಪ್ರಮುಖ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ ಹಾಗೂ ಮುಹಮ್ಮದ್ ಶಮಿ ತಂಡಕ್ಕೆ ಸರಣಿ ಗೆದ್ದುಕೊಟ್ಟು ವಿಶ್ರಾಂತಿ ಮರಳುವ ವಿಶ್ವಾಸದಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆದಿರುವ ಕೊಹ್ಲಿ ಪಡೆ ಈ ಪಂದ್ಯವನ್ನು ಜಯಿಸಿದರೆ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಮಾಜಿ ನಾಯಕ ಎಂ.ಎಸ್. ಧೋನಿ ತನ್ನ ತವರು ಮೈದಾನದಲ್ಲಿ ಹೆಚ್ಚು-ಕಡಿಮೆ ಕೊನೆಯ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ.