Monday, January 20, 2025
ಸುದ್ದಿ

ಬರಪೀಡಿತ ತಾಲೂಕುಗಳ ಮಕ್ಕಳಿಗೆ ಮಧ್ಯಾಹ್ನದ ‘ಬಿಸಿಯೂಟ’ – ಕಹಳೆ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕುಗಳ ಮಕ್ಕಳ ಹಸಿವು ನೀಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

2018-19 ರ ಸಾಲಿನಲ್ಲಿ 30 ಜಿಲ್ಲೆಗಳ 150 ತಾಲೂಕುಗಳನ್ನು ಬರಪೀಡಿತವೆಂದು ಗುರುತಿಸಲಾಗಿದ್ದು, ಈ ತಾಲೂಕುಗಳ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ಲಭಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು