Monday, January 20, 2025
ರಾಜಕೀಯಸುದ್ದಿ

ಲೋಕಸಭೆ ಸಮರದಲ್ಲಿ ಬಿಜೆಪಿ ಹಾಲಿ ಸಂಸದರೆಲ್ಲರೂ ಕಣಕ್ಕಿಳಿಯುವುದು ಬಹುತೇಕ ಖಚಿತ – ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಲೋಕಸಭೆ ಸಮರದಲ್ಲಿ ಬಿಜೆಪಿಯ ಹಾಲಿ ಸಂಸದರೆಲ್ಲರೂ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ 28 ಕ್ಷೇತ್ರಗಳಿಗೂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ನೀಡಿ ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುತೇಕ ಹದಿನೈದು ಕ್ಷೇತ್ರಗಳಲ್ಲಿ ಎಲ್ಲ ಹಾಲಿ ಸದಸ್ಯರಿಗೆ ಟಿಕೆಟ್‌ ಫೈನಲ್‌ ಮಾಡಲಾಗಿದ್ದು, 13 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಾತಿವಾರು, ರ‍್ಚಸ್ಸು, ಸಾರ‍್ಥ್ಯ ಆಧರಿಸಿ ಅಭ್ಯರ್ಥಿಗಳ ಪಟ್ಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಸಂಸದೀಯ ಮಂಡಳಿ ಸಭೆಗೂ ಮುನ್ನ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದ ಯಡಿಯೂರಪ್ಪ ಅವರು, ಕಾಂಗ್ರೆಸ್‌-ಜೆಡಿಎಸ್‌ ಜತೆಗೂಡಿ ಚುನಾವಣೆ ಎದುರಿಸಿದರೆ ಹಾಲಿ ಬಿಜೆಪಿ ಸಂಸದರು ಇರುವ ಮೈಸೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೀದರ್‌ ಸೇರಿ ಕೆಲವು ಕ್ಷೇತ್ರಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆಯೂ ವಿವರಣೆ ನೀಡಿದರು ಎಂದು ಹೇಳಲಾಗಿದೆ.

ಹದಿಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಲೋಕಸಭೆ ಕ್ಷೇತ್ರಾವಾರು ನಡೆಸಿದ ಸಭೆಗಳಲ್ಲಿ ವ್ಯಕ್ತವಾದ ಅಭಿಪ್ರಾಯ, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರಿಂದ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಅಭ್ಯರ್ಥಿಗಳ  ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಅಮಿತ್‌ ಶಾ ಗಮನಕ್ಕೆ ತಂದರು ಎನ್ನಲಾಗಿದೆ.

ಹಾಲಿ ಸಂಸದರ ಬಗ್ಗೆಯೂ ಕೆಲವು ಕ್ಷೇತ್ರಗಳಲ್ಲಿ ವಿರೋಧವಿರುವ ಬಗ್ಗೆಯೂ ಪ್ರಸ್ತಾಪಿಸಿದರು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಗೋ ಬ್ಯಾಕ್‌ ಅಭಿಯಾನದ ಹಿಂದೆ ಯಾರಿದ್ದಾರೆ ಎಂಬುದನ್ನು ಗಮನಕ್ಕೆ ತಂದರು. ಅದೇ ರೀತಿ
ಬೆಂಗಳೂರು ದಕ್ಷಿಣ ಕ್ಷೇತ್ರದ ಪರಿಸ್ಥಿತಿ, ತೇಜಸ್ವಿನಿ ಅನಂತಕುಮಾರ್‌ ಅವರು ಟಿಕೆಟ್‌ ಕೇಳುತ್ತಿರುವುದು. ಕೆಲವು ನಾಯಕರ ವಿರೋಧ ವ್ಯಕ್ತಪಡಿಸಿ ಒಕ್ಕಲಿಗ ಅಭ್ಯರ್ಥಿಗೆ ಕೊಡುವಂತೆ ಒತ್ತಡ ಹೇರುತ್ತಿರುವುದರ ಬಗ್ಗೆಯೂ ತಿಳಿಸಿದರು ಎಂದು ಹೇಳಲಾಗಿದೆ.