Sunday, January 19, 2025
ಸುದ್ದಿ

ನಾಳೆ ಖಾಸಗಿ ಆಸ್ಪತ್ರೆ ಓಪಿಡಿ ಬಂದ್ | ರಾಜ್ಯಾದ್ಯಾಂತ ವೈದ್ಯರ ಸಾಮೂಹಿಕ ಮುಷ್ಕರ

ಬೆಂಗಳೂರು : ಖಾಸಗಿ ಆಸ್ಪತ್ರೆಗಳ ವೈದ್ಯರ ಮತ್ತು ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದ್ದು, ನಾಳೆಯಿಂದ(ಗುರುವಾರ) ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ನಾಳೆ ಬೆಳಗ್ಗೆ 8ಗಂಟೆಯಿಂದ ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಬಂದ್ ಆಗಲಿದ್ದು, ಎಮರ್ಜೆನ್ಸಿ ಚಿಕಿತ್ಸೆಗಳು ಎಂದಿನಂತೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಬೆಳಗಾವಿಯಲ್ಲಿ ವೈದ್ಯರುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ.

ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆ, ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ಬೆಳಗಾವಿಯಲ್ಲಿ ನಡೆಯುವ ವೈದ್ಯರ ಮುಷ್ಕರಕ್ಕೆ ತೆರಳಿದ್ದಾರೆ. ಒಟ್ಟು ಜಿಲ್ಲೆಯಿಂದ 460 ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಂದೆ ವೈದ್ಯಕೀಯ ಸೇವೆ ಇಲ್ಲ ಎಂದು ಬೋರ್ಡ್, ಬ್ಯಾನರ್ ಹಾಕಲಾಗಿತ್ತು. ಮಂಗಳವಾರದ ವರೆಗೆ ಹೊರ ರೋಗಿಗಳಿಗೆ ಚಿಕಿತ್ಸೆ ಬಂದ್ ಮಾಡಲಾಗಿತ್ತು,

ಬೆಳಗಾವಿಯಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ನಾಳೆ ಆರು ಸಾವಿರ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ, 22 ಸಾವಿರ ವೈದ್ಯರುಗಳು ಬೆಂಬಲ ನೀಡುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ವೈದ್ಯರ ರಜೆ ರದ್ದು;

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

Leave a Response