Recent Posts

Sunday, January 19, 2025
ಸುದ್ದಿ

ಶಿರಾಡಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ; ನಾಲ್ವರು ದುರ್ಮರಣ – ಕಹಳೆ ನ್ಯೂಸ್

ಸಕಲೇಶಪುರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‍ನಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೊಬೈಲ್ ಸಂಪರ್ಕ ಇಲ್ಲದೆ ಇದ್ದುದರಿಂದ ಅಪಘಾತಕ್ಕೆ ಒಳಗಾದವರ ಜೀವ ಉಳಿಸಲು ಜನರು ಹರ ಸಾಹಸಪಟ್ಟರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು