ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಬಿಸಿರೋಡಿನಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ಪುರಸಭಾ ಅಧಿಕಾರಿ ಗಳು ಇಂದು ಮುಂಜಾನೆ ತೆರಗೊಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆಯ ನೆಪವೊಡ್ಡಿ ಪೊಳಲಿ ದೇವಾಲಯದ ಬ್ರಹ್ಮಕಲಶೋತ್ಸವ ದ ಅಂಗವಾಗಿ ಹಾಕಲಾಗಿದ್ದ ಬ್ಯಾನರ್ ಗಳ ತೆರವು ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ.
ಬ್ರಹ್ಮಕಲಶೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ತೆರವುಗೊಳಿಸುವ ವೇಳೆ ಭಕ್ತರು ಹಾಗೂ ಪುರಸಭಾ ಅಧಿಕಾರಿಗಳ ನಡುವೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು.
ಜಿಲ್ಲಾಧಿಕಾರಿಗಳಿಗೆ ಭಕ್ತರು ಪೋನ್ ಮೂಲಕ ಸಂಪರ್ಕ ಮಾಡಲಾಗಿ ತಾತ್ಕಾಲಿಕವಾಗಿ ತೆರವು ಕಾರ್ಯಕ್ಕೆ ಬ್ರೇಕ್ ಬಿದ್ದಿದೆ.