Tuesday, January 21, 2025
ಸುದ್ದಿ

ಪ್ರಗತಿ ಸ್ಟಡಿ ಸೆಂಟರ್ ಪುತ್ತೂರಿನಲ್ಲಿ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಡಿಂಗ್‌ನಲ್ಲಿ  ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರಿನ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬೀಳ್ಕೋಡುವ ಸಮಾರಂಭವು ದಿನಾಂಕ 09/03/2019 ನೇ ಶನಿವಾರ ಜರಗಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಗೋಕುಲ್‌ನಾಥ್ ಪಿ.ವಿ, ಪ್ರಾಂಶುಪಾಲರು ಕೆ.ಹೇಮಲತಾ, ಹಾಸ್ಟೆಲ್ ಮೇಲ್ವಿಚಾರಕರು ಹಾಗೂ ಉಪನ್ಯಾಸಕರಾದ ಅಭಿಲಾಷ್, ಚಿದಾನಂದ, ವಸಂತ್, ಧನಂಜಯ್, ಅಶ್ವಿನಿ ಮತ್ತು ಪೂಜಶ್ರೀ ಗೌಡ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಗತಿಯಲ್ಲಿ ತಮ್ಮ ಅನುಭವಗಳನ್ನು ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಬಾಂಧವ್ಯವನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು.

ಸಂಸ್ಥೆಯ ಸಂಚಾಲಕರು ಮಾತನಾಡುತ್ತಾ, ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಅಳವಡಿಸಿಕೊಂಡ ಶಿಸ್ತು, ಸಮಯಪ್ರಜ್ಞೆ, ಪರಿಶ್ರಮ ಮತ್ತು ಕ್ರೀಯಾಶೀಲ ವ್ಯಕ್ತಿತ್ವವನ್ನು ಮುಂದಕ್ಕೂ ನಿಮ್ಮ ಜೀವನದಲ್ಲಿ ಮುಂದುವರಿಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ಪ್ರಾಂಶುಪಾಲರು, ಎಲ್ಲಾ ಉಪನ್ಯಾಸಕರು ಹಾಗೂ ಮೇಲ್ವಿಚಾರಕರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಶುಭ ಹಾರೈಸಿದರು.