Tuesday, January 21, 2025
ಸುದ್ದಿ

ಕಪ್ಪತಗುಡ್ಡಕ್ಕೆ ಬಿದ್ದ ಬೆಂಕಿ: ಅಪಾರ ಪ್ರಮಾಣದ ಔಷಧಿ ಸಸ್ಯ ನಾಶ – ಕಹಳೆ ನ್ಯೂಸ್

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಹೆಸರುವಾಸಿಯಾಗಿರುವ ಕಪ್ಪತಗುಡ್ಡಕ್ಕೆ ರವಿವಾರ ಸಂಜೆ ಕಾಣಿಸಿಕೊಂಡ ಬೆಂಕಿಗೆ ಅಪಾರ ಪ್ರಮಾಣದ ಔಷಧಿ ಸಸ್ಯಗಳು ನಾಶವಾಗಿವೆ.

ಬೆಂಕಿಯನ್ನು ಹತೋಟಿಗೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿಯಿಡೀ ಹರಸಾಹಸಪಟ್ಟು, ಕೊನೆಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದ ಬಳಿ ಈ ಬೆಂಕಿ ಕಾಣಿಸಿಕೊಂಡಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ. ಬಿಸಿಲಿನ ತಾಪಕ್ಕೆ ಬೆಂಕಿ ತಗುಲಿರಬೇಕು ಎಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.