Tuesday, January 21, 2025
ರಾಜಕೀಯಸುದ್ದಿ

ರಂಗೇರುತ್ತಿದೆ ಲೋಕಸಭಾ ಚುನಾವಣೆ: ಸುಮಲತಾರ “ಕೈ” ಬಿಟ್ಟ “ಕಮಲ” – ಕಹಳೆ ನ್ಯೂಸ್

ಲೋಕಸಭೆ ಚುನಾವಣೆ ರಂಗೇರುತ್ತಿದ್ದು, ಭರ್ಜರಿ ಮತ ಪ್ರಚಾರ ನಡೆಯುತ್ತಿದೆ, ಇವೆಲ್ಲದರ ನಡುವೆ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಕ್ಷೇತ್ರ ಸುಮಲತಾ ಅಂಬರೀಶ್ ಮತ್ತು ನಿಖಿಲ್ ಕುಮಾರ್ ಅವರ ಸ್ಪರ್ಧೆಯಿಂದಾಗಿ ಗಮನ ಸೆಳೆದಿದೆ.

ಮಂಡ್ಯದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಅವರಿಗೆ ಬಿಜೆಪಿ ಬೆಂಬಲ ನೀಡಲಿದೆ ಎನ್ನಲಾಗಿತ್ತು. ಆದರೆ, ಮಂಡ್ಯದಿಂದ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿದ್ದರೆ, ಜನರಿಗೆ ತಪ್ಪು ಸಂದೇಶ ಹೋಗುವ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಕ್ಷೇತರರಾಗಿ ಸ್ಪರ್ಧಿಸುವ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಲು ಬಿಜೆಪಿ ಈ ಮೊದಲು ಯೋಜಿಸಿತ್ತು. ಆದರೆ, ಈ ನಿರ್ಧಾರವನ್ನು ಬದಲಿಸಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಲಾಗಿದೆ.

ಆದರೆ, ಇದಕ್ಕೆ ತಲೆಕೆಡಿಸಿಕೊಳ್ಳದ ಸುಮಲತಾ ಈಗಾಗಲೇ ಪ್ರಚಾರ ಕೈಗೊಂಡಿದ್ದು, ಅವರಿಗೆ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ.