Wednesday, January 22, 2025
ಸುದ್ದಿ

ದೇಶದ ಅತ್ಯುನ್ನತ ಸ್ಥಾನವನ್ನು ಪಡೆಯುವ ಮಟ್ಟಿಗೆ ಹೆಣ್ಣು ಬದಲಾಗಿದ್ದಾಳೆ: ಅಶ್ವಿನಿ ಕೃಷ್ಣಮೂರ್ತಿ – ಕಹಳೆ ನ್ಯೂಸ್

ಪುತ್ತೂರು: ಸೀಮಿತ ಎನ್ನುವ ಕಾಲದಿಂದ ದೇಶದ ಅತ್ಯುನ್ನತ ಸ್ಥಾನವನ್ನು ಪಡೆಯುವ ಮಟ್ಟಿಗೆ ಹೆಣ್ಣು ಬದಲಾಗಿದ್ದಾಳೆ. ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿ ಸಮಳಾಗಿ ನಿಂತು ತನ್ನ ಸಾಮಥ್ರ್ಯದ ಅರಿವು ಮೂಡಿಸಿದ್ದಾಳೆ ಎಂದು ಹೆಸರಾಂತ ಮಹಿಳಾ ಉದ್ಯಮಿ ಅಡ್ಯನಡ್ಕದ ವಾರಣಾಸಿ ಫಾಮ್ರ್ಸ್‍ನ ಡಾ.ಅಶ್ವಿನಿ ಕೃಷ್ಣಮೂರ್ತಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಹೆಣ್ಣು ಆಕಾಶದೆತ್ತರದಷ್ಟನ್ನೂ ಸಾಧಿಸಬಲ್ಲಳು ಎಂಬುದನ್ನು ಸಾಧಿಸಿ ತೋರಿಸಿದ ಅನೇಕ ಮಹಿಳೆಯರು ನಮ್ಮ ನಡುವೆ ಇದ್ದಾರೆ. ಅವರ ಸಾಧನೆಯ ಪಥ ಎಲ್ಲರಿಗೂ ದಾರಿ ದೀಪವಾಗಲಿ ಎಂದು ಆಶಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಕೃಷಿಯಿಂದ ಕೈಗಾರಿಕೆಯವರೆಗೆ, ಶಿಕ್ಷಣದಿಂದ ಸಂಶೋಧನೆಯವರೆಗೆ ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆ ತನ್ನ ಛಾಪನ್ನು ಮೂಡಿಸಿದ್ದಾಳೆ, ನವ ಭಾರತ ನಿರ್ಮಾಣದಲ್ಲಿ ಮಹಿಳೆಯರಿಗೆ ಅಗ್ರಸ್ಥಾನವಿದೆ ಎಂದು ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಐಯ್ಯರ್ ಮಹಿಳಾ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಹಿಳಾ ದಿನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ವಿದ್ಯಾ.ಪಿ.ಎಂ ಸ್ವಾಗತಿಸಿ ಲಿಖಿತಾ.ಎಂ.ಪಿ ವಂದಿಸಿದರು. ಫಾತಿಮತ್ ಸುಹೈನಾ ಜಬೀನ್ ಕಾರ್ಯಕ್ರಮ ನಿರ್ವಹಿಸಿದರು.