Thursday, January 23, 2025
ಸುದ್ದಿ

ತಲ್ವಾರ್ ಹಿಡಿದು ಫೋಟೋಗೆ ಪೋಸ್: ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಸಂಸದ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಆಯುಧಗಳನ್ನು ಪ್ರದರ್ಶಿಸುವಂತಿಲ್ಲ. ಅಲ್ಲದೆ ಅದನ್ನು ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆಯೂ ಇಲ್ಲ. ಆದ್ರೆ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಮತ್ತು ಶಾಸಕ ಅರವಿಂದ್ ಬೆಲ್ಲದ್ ನೀತಿ ಸಂಹಿತೆ ಉಲ್ಲಂಘಿಸಿ ಈಗ ಸುದ್ದಿಯಾಗಿದ್ದಾರೆ.

ಪ್ರಹ್ಲಾದ್ ಜೋಶಿ ಮತ್ತು ಬೆಲ್ಲದ್ ತಲ್ವಾರ್ ಹಿಡಿದ ಫೋಟೋವನ್ನು, ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಬಿಜೆಪಿ ನಾಯಕರು ಧಾರವಾಡದ ಅಶೋಕ ಹೋಟೆಲ್‌ಗೆ ಬಂದಾಗ ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಫೋಟೋವನ್ನು ಬಿಜೆಪಿ ಕಾರ್ಯಕರ್ತನೊಬ್ಬ ನೀತಿ ಸಂಹಿತೆ ಜಾರಿಯಾದ ಮೇಲೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ನಾವೇ ಗೆಲ್ಲೋದು ಅಂತಾ ಹಾಕಿ, ನಿಯಮ ಉಲ್ಲಂಘಿಸಿದ್ದಾರೆ.