Thursday, January 23, 2025
ಸುದ್ದಿ

ಮಾರಣಾಂತಿಕ ಹಲ್ಲೆ ಪ್ರಕರಣ: ಇಂದು ಶಾಸಕ ಗಣೇಶ್ ರ ಜಾಮೀನು ಅರ್ಜಿಯ ವಿಚಾರಣೆ – ಕಹಳೆ ನ್ಯೂಸ್

ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ತಂಗಿದ್ದ ವೇಳೆ ಮದ್ಯದ ಅಮಲಿನಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ನ್ಯಾಯಾಂಗ ಬಂಧನದಲ್ಲಿದ್ದು, ಇಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಹಲ್ಲೆ ನಂತರ ತಮ್ಮ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗಣೇಶ್ ಅವರನ್ನು ಬಿಡದಿ ಪೊಲೀಸರು, ಗುಜರಾತಿನಲ್ಲಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯಾಲಯ ಗಣೇಶ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರು ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗಣೇಶ್ ಅವರ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ.