Friday, January 24, 2025
ಸುದ್ದಿ

ಬಂಡೀಪುರ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಆಕಸ್ಮಿಕವಲ್ಲ ಸೇಡು? – ಕಹಳೆ ನ್ಯೂಸ್

ಚಾಮರಾಜನಗರ: ಬಂಡೀಪುರಕ್ಕೆ ಬೆಂಕಿ ಬಿದ್ದಿದ್ದು ಆಕಸ್ಮಿಕವಲ್ಲ, ಸೇಡು ತೀರಿಸಿಕೊಳ್ಳಲು ಮನುಷ್ಯರೇ ಮಾಡಿದ ಕೆಲಸ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಅರಣ್ಯ ಸಂಪತ್ತು ರಕ್ಷಿಸುವುದಾಗಿ ಹೋರಾಡುತ್ತಿರುವ ಸರ್ಕಾರೇತರ ಸಂಸ್ಥೆ ಸದಸ್ಯರೇ ಬಂಡೀಪುರ ಅಭಯಾರಣ್ಯದಲ್ಲಿನ ಕಾಡ್ಗಿಚ್ಚಿಗೆ ಕಾರಣರಾಗಿದ್ದಾರೆ ಎಂದು ಅರಣ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ.

ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಗೆ ಕಾರಣ ಪತ್ತೆ ಹಚ್ಚಲು ಇಲಾಖೆ ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ ಎನ್‌ಜಿಓ ಗಳ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಕ್ಷ್ಯಾಧಾರಗಳು ಲಭ್ಯವಾದ ಬಳಿಕ ಆರೋಪಿತರ ಹೆಸರನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ. ಬಂಡೀಪುರದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಸಿಬ್ಬಂದಿ ಹಾಗೂ ಸಾವಿರಾರು ಸ್ವಯಂ ಸೇವಕರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಹಜ ಸ್ಥಿತಿಯತ್ತ ಬಂಡೀಪುರದ ಕಾಡು; ಅಪಾಯದಿಂದ ಪಾರಾದ ಪ್ರಾಣಿಗಳು
ಆದರೆ ಮತ್ತೊಂದು ಕಡೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿತ್ತು. ಬಂಡೀಪುರದಲ್ಲಿ ವನ್ಯ ಜೀವಿಗಳ ಛಾಯಾಚಿತ್ರಗಳನ್ನು ತೆಗೆಯಲು ಕೆಲವು ಎನ್‌ಜಿಓಗಳು ಅನುಮತಿ ಕೋರಿದ್ದರು.

ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡಿರಲಿಲ್ಲ ಹಾಗಾಗಿ ಆಕ್ರೋಶದಿಂದ ಸದಸ್ಯರು ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ಅರಣ್ಯ ಪ್ರವೇಶಿಸಿ ಬೆಂಕಿ ಹಚ್ಚಿರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದಾರೆ.