ಹೊಸಪೇಟೆ: ವಿಜಯ ನಗರ ಕಾಂಗ್ರೆಸ್ ಶಾಸಕ ಆನಂದ ಸಿಂಗ್ಗೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.
ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿ ಆದೇಶ ಹೊರಡಿಸಿದೆ.
ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.