ನೀತಿ ಸಂಹಿತೆ ಜಾರಿ ಮೂಲಕ ಲೋಕಸಭೆ ಚುನಾವಣೆ 2019 ರ ಪ್ರಕ್ರಿಯೆ ಶುರುವಾಗಿದೆ. ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಹೆಸ್ರು ಘೋಷಣೆ ಆರಂಭವಾಗಿದೆ. ಬಿಜೆಪಿ ಶೀಘ್ರವೇ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದೆ ಈ ಬಾರಿ 1000 ಕ್ಕೂ ಹೆಚ್ಚು ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ಮೈತ್ರಿ ಮಾಡಿಕೊಂಡಿದೆ. ಹಾಗಾಗಿ ಹಿಂದಿನ ಬಾರಿ ಸ್ಪರ್ಧಿಸಿದ್ದ ಸುಮಾರು 100 ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿಯುತ್ತಿಲ್ಲ. ಬಿಹಾರದಲ್ಲಿ ಬಿಜೆಪಿ ಹಾಗೂ ಜನತಾದಳ ಯುನೈಡೆಟ್ ಒಪ್ಪಂದದಿಂದಾಗಿ 50 ಅಭ್ಯರ್ಥಿಗಳು ಚುನಾವಣಾ ಕಣದಿಂದ ಹೊರಗಿರಲಿದ್ದಾರೆ.
ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್, ಆರ್ ಎಲ್ ಎಸ್ ಸೇರಿದಂತೆ ಕೆಲ ಪಕ್ಷಗಳ ಮಧ್ಯೆ ಒಪ್ಪಂದ ನಡೆಯಲಿದ್ದು, 50 ಕ್ಕೂ ಹೆಚ್ಚು ಅಭ್ಯರ್ಥಿಗಳು ಚುನಾವಣೆಯಿಂದ ಹೊರಗಿರಬೇಕಾಗುತ್ತದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಅಸ್ಸಾಂ ಮಹಾರಾಷ್ಟ್ರ ಸೇರಿದಂತೆ ಪ್ರತಿ ರಾಜ್ಯದಲ್ಲೂ ಪಕ್ಷಗಳ ಮಧ್ಯೆ ಮೈತ್ರಿಯಿಂದಾಗಿ ಹಿಂದಿನ ಬಾರಿಗಿಂತ ಈ ಬಾರಿ ಸುಮಾರು 1000 ಅಭ್ಯರ್ಥಿಗಳು ಚುನಾವಣಾ ಕಣದಿಂದ ಹೊರಗಿರಲಿದ್ದಾರೆ.