Saturday, November 30, 2024
ರಾಜಕೀಯಸುದ್ದಿ

ಐಟಿ ಇಲಾಖೆ ದಾಳಿ ನಡೆಸಿದ್ದ ಪ್ರಕರಣ: ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಮತ್ತು ಹಾವೇರಿಯಲ್ಲಿ ಐಟಿ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿಗೆ ನೀಡಲು ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಶುಕ್ರವಾರ ಐಟಿ ಇಲಾಖೆ ನಡೆಸಿದ ದಾಳಿಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರಿಂದ 2 ಕೋಟಿಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಚಾರಣೆ ಸಂದರ್ಭದಲ್ಲಿ ಕೃಷ್ಣಭೈರೇಗೌಡ ಹೆಸರನ್ನು ಹೇಳಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗಾಗಿ ಹಣ ಸಂಗ್ರಹಿಸುತ್ತಿದೆ ಎಂದು ಬಿಎಸ್ ವೈ ದೂರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಕೃಷ್ಣ ಭೈರೇಗೌಡ ಅವರು ಕೂಡಲೇ ಉತ್ತರ ನೀಡಬೇಕು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಇರುವುದು 10% ಮೈತ್ರಿ ಸರ್ಕಾರ ಎಂದು ಆರೋಪಿಸಿದ್ದರು. ಆದರೆ ಇದು ಹತ್ತು ಪರ್ಸೆಂಟ್ ಅಲ್ಲ, ಇಪ್ಪತ್ತು ಪರ್ಸೆಂಟ್ ನ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.