Tuesday, January 21, 2025
ಸುದ್ದಿ

ದಕ್ಷಿಣ ಕನ್ನಡ ಕಮಲ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ – ಕಹಳೆ ನ್ಯೂಸ್

ಮಂಗಳೂರು : ಕಳೆದ 35 ವರ್ಷಗಳಿಂದ ಬಿಜೆಪಿ ಪಕ್ಷ ಹಾಗೂ ಸಂಘಟನೆಗಳಲ್ಲಿ ದುಡಿಯುತ್ತಿದ್ದು, ಈ ಬಾರಿ ಪಕ್ಷ ತನಗೆ ಲೋಕಸಭಾ ಅಭ್ಯರ್ಥಿ ಸ್ಥಾನಕ್ಕೆ ಅವಕಾಶ ನೀಡಬೇಕು, ಈಗಾಗಲೇ ಎರಡು ಬಾರಿ ಅಭ್ಯರ್ಥಿಯಾಗಿರುವ ಹಾಲಿ ಸಂಸದರನ್ನು ಬದಲಾವಣೆ ಮಾಡಿ, ತನಗೆ ಅವಕಾಶ ನೀಡಬೇಕೆಂದು ಈಗಾಗಲೇ ಒತ್ತಾಯ ಮಾಡಲಾಗಿದೆ. ನನ್ನ ಹೋರಾಟ ಯಾರ ವಿರುದ್ಧವೂ ಅಲ್ಲ ಎಂದು ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು.

ಇವರು ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಜನ್ಮಸ್ಥಳ ಗೆಜ್ಜೆಗಿರಿ ನಂದನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ಕಾರ್ಯಕರ್ತರ ಆಶಯ ಈ ಬಾರಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿ ಬದಲಾವಣೆಯಾಗಬೇಕು ಎನ್ನುವುದಾಗಿದ್ದು, ಕಳೆದ ಮೂವತ್ತೈದು ವರ್ಷಗಳಿಂದ ಬಿಜೆಪಿಗಾಗಿ ಹಾಗೂ ಹಿಂದೂ ಸಂಘಟನೆಗಳಲ್ಲಿ ದುಡಿದ ತನಗೆ ಈ ಬಾರಿ ಲೋಕಸಭಾ ಅಭ್ಯರ್ಥಿ ಸ್ಥಾನದ ಟಿಕೆಟ್ ನೀಡಬೇಕು, ದೇವರ ಅನುಗ್ರಹದಿಂದ ಆ ಅವಕಾಶ ಒದಗಿ ಬರುವುದು. ಹಿಂದಿನ ವಿಧಾನಸಭಾ ಚುನಾವಣೆಗೂ ಈ ಬಾರಿಯ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ತಣ್ಣಗಾಗಿದ್ದ ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮತ್ತೆ ಲೋಕಸಭಾ ಟಿಕೆಟ್‍ಗಾಗಿ ಲಾಬಿ ಆರಂಭಿಸಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಕಮಲ ಪಾಳಯದಲ್ಲಿ ಸಂಸದ ನಳಿನ್ ಕುಮಾರ ಕಟೀಲ್ ವಿರುದ್ಧ ಅಸಮಾಧಾನ ಹೊಗೆಯಾಡಲು ಆರಂಭಿಸಿದೆ.