Tuesday, January 21, 2025
ಸುದ್ದಿ

ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆ –ಕಹಳೆ ನ್ಯೂಸ್

ಮಂಗಳೂರು: ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ೭ ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.

ಅಂದಿನ ಪಿಎಸ್‌ಐ ಸುಧಾಕರ್ ಅವರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ೧೫ ಮಂದಿ ಸಾಕ್ಷಿ ವಿಚಾರಣೆ ನಡೆಸಿ ತೀರ್ಪು ನೀಡಿ, ಅಪರಾಧಿಗೆ ೭ ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ೧೦ ಸಾವಿರ ರೂ. ದಂಡದ ಹಣದಲ್ಲಿ ೭,೫೦೦ ರೂ. ಸಂತ್ರಸ್ತೆಗೆ ನೀಡಬೇಕು. ಅಲ್ಲದೆ, ಆಕೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸರ್ಕಾರದಿಂದ ಪರಿಹಾರ ಪಡೆಯಲು ನ್ಯಾಯಾಲಯ ಶಿಫಾರಸು ಮಾಡಿದೆ. ವಿಶೇಷ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಸರ್ಕಾರದ ಪರ ವಾದಿಸಿದ್ದರು
ಕಾಸರಗೋಡು ಮಂಜೇಶ್ವರದ ವರ್ಕಾಡಿ ಗ್ರಾಮದ ಬಬ್ರುಕೋಡಿ ನಿವಾಸಿ ಕೆ.ಎಂ.ಅಶ್ರಫ್ ಶಿಕ್ಷೆಗೊಳಗಾದ ಅಪರಾಧಿ. ಕೇಬಲ್ ಆಪರೇಟಿಂಗ್ ಕೆಲಸ ಮಾಡುತ್ತಿದ್ದ ಅಶ್ರಫ್ ದೇರಳಕಟ್ಟೆಯ ಮನೆಯೊಂದಕ್ಕೆ ೨೦೧೪ರ ಡಿ.೨೩ರಂದು ಕೇಬಲ್ ರಿಪೇರಿಗೆಂದು ಹೋಗಿದ್ದ ಸಂದರ್ಭ ಅಲ್ಲಿದ್ದ ನಾಲ್ಕೂವರೆ ವರ್ಷದ ಬಾಲಕಿಯನ್ನು ಮನೆಯ ಮೇಲ್ಛಾವಣಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂದರ್ಭ ಬಾಲಕಿ ಬೊಬ್ಬೆ ಹಾಕಿದಾಗ ಆರೋಪಿ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಎಂದು ಆರೋಪಿಸಿ ಬಾಲಕಿಯ ತಾಯಿ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು