ನವದೆಹಲಿ: ದಶಕಗಳಿಂದಲೂ ಭಾರಿ ಚರ್ಚೆಗೀಡಾಗಿದ್ದ ಲೋಕಪಾಲ್ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿದ್ದು, ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿಸಿ ಘೋಷ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲೋಕಪಾಲ್ ನೇಮಕಕ್ಕೆ ಸುಪ್ರೀಂ ಕೋರ್ಟ್ ನೀಡಿದ್ದ ಅಂತಿಮ ಗಡುವು ಮುಕ್ತಾಯದ ಬೆನ್ನಲ್ಲೇ ಕೇಂದ್ರ ಸರ್ಕಾರ ಲೋಕಾಪಾಲ್ ಆಗಿ ಪಿಸಿ ಘೋಷ್ ಅವರನ್ನು ಆಯ್ಕೆ ಮಾಡಲು ಮುಂದಾಗಿದೆ ಎಂದು ಖಾಸಗಿ ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿಯಲ್ಲಿ ಹೇಳಿದೆ.
ಈ ಹಿಂದೆ ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಯಲಲಿತಾ ಸೇರಿದಂತೆ ಅವರ ಆಪ್ತೆ ಶಶಿಕಲಾ ಸೇರಿದಂತೆ ನಾಲ್ವರಿಗೆ ಶಿಕ್ಷೆ ವಿಧಿಸಿದ್ದರು. ಇನ್ನು ಲೋಕಪಾಲ್ ನಲ್ಲಿ ನಿವೃತ್ತ ೪ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ೪ ಐಎಎಸ್ ಅಧಿಕಾರಿಗಳು ಸದಸ್ಯರಾಗಿರಲಿದ್ದಾರೆ.