ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ರೌಡಿ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ ಘಟನೆ ಮಂಗಳೂರಿನ ತಲಪಾಡಿಯಲ್ಲಿ ನಡೆದಿದೆ.
ತಲಪಾಡಿ ಕೆ.ಸಿ.ರೋಡ್ ನಿವಾಸಿ ಮುನಾವರ್ (32) ಎಂಬಾತನನ್ನು ಉಳ್ಳಾಲ ಠಾಣಾ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 1 ಕೆ.ಜಿ 50 ಗ್ರಾಂ ತೂಕದ ಗಾಂಜಾ, ಮೋಟಾರು ಸೈಕಲ್, ಮೊಬೈಲ್‌ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.