ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೊಸ ಜವಾಬ್ದಾರಿ ನೀಡಿದ್ದಾರೆ.
ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯನವರ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮೈತ್ರಿಯಲ್ಲಿ ಅಪಸ್ವರ ಬರದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ತುಮಕೂರು ಲೋಕಸಭಾ ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡೋದು ಬೇಡ, ಅಭ್ಯರ್ಥಿಗಳ ಘೋಷಣೆ ಬಳಿಕ ಅಸಮಾಧಾನಿತರನ್ನು ನೀವೇ ಸಂಭಾಳಿಸಬೇಕು.
ಮೈತ್ರಿ ಅಭ್ಯರ್ಥಿಗಳ ಪರವಾಗಿ ಒಗ್ಗೂಡಿ ಕೆಲಸ ಮಾಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.