ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸಹೋದರ ಬಿ. ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದ್ರೆ ವೆಂಕಟೇಶ್ ಪಕ್ಷ ಸೇರ್ಪಡೆ ವೇಳೆ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀರಾಮುಲು, ನಗರ ಶಾಸಕ ಸೋಮಶೇಖರ್ ರೆಡ್ಡಿ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಚನ್ನಬಸವನಗೌಡ ಪ್ರಸಾದ್ ಸೇರ್ಪಡೆ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ ಅಂತಾ ಹೇಳಿದರು.
ಇದೇ ವೇಳೆ ಮಾತನಾಡಿದ ಪ್ರಸಾದ್, ಮೋದಿ ಅವರ ಆಡಳಿತದಿಂದ ಖುಷಿಯಾಗಿ, ಬಿಜೆಪಿ ಸೇರಿದ್ದು, ಹೈಕಮಾಂಡ್ ಒಪ್ಪಿದ್ರೆ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಹಾಗೆಯೇ ಸೋದರ ನಾಗೇಂದ್ರ ಕಾಂಗ್ರೆಸ್‍ನಲ್ಲಿರುವುದಕ್ಕೂ, ನಾನು ಬಿಜೆಪಿ ಸೇರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.