ನವದೆಹಲಿ: ಜಸ್ಟೀಸ್ ಪಿನಾಕಿ ಚಂದ್ರ ಘೋಷ್ ರನ್ನು ಲೋಕಪಾಲರಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.
ನ್ಯಾಯಮೂರ್ತಿ ದಿಲೀಪ್ ಬಿ ಬೊಸ್ಸಾಲೆ, ನ್ಯಾಯಮೂರ್ತಿ ಪಿ.ಕೆ.ಮೊಹಂತಿ, ನ್ಯಾಯಮೂರ್ತಿ ಅಭಿಲಾಶಾ ಕುಮಾರಿ ಮತ್ತು ನ್ಯಾಯಮೂರ್ತಿ ಎ.ಕೆ. ತ್ರಿಪಾಠಿ ಅವರನ್ನು ನ್ಯಾಯಾಂಗ ಸದಸ್ಯರಾಗಿ ನೇಮಿಸಲಾಗಿದೆ.
ಜೊತೆಗೆ ದಿನೇಶ್ ಕುಮಾರ್ ಜೈನ್, ಅರ್ಚನಾ ರಾಮಸುಂದರ್, ಮಹೇಂದರ್ ಸಿಂಗ್ ಮತ್ತು ಐಪಿ ಗೌತಮ್ ರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
2017ರಲ್ಲಿ ಸುಪ್ರೀಂಕೋರ್ಟಿನಿಂದ ನಿವೃತ್ತಿಹೊಂದಿದ ಜಸ್ಟೀಸ್ ಘೋಷ್, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದಾರೆ. ಇದಕ್ಕೂ ಮೊದಲು ಕೋಲ್ಕತ್ತಾದ ಹೈಕೋರ್ಟಿನ ಜಡ್ಜ್ ಹಾಗೂ ಆಂಧ್ರಪ್ರದೇಶ ಹೈಕೋರ್ಟಿನ ಮಾಜಿ ಮುಖ್ಯ ಜಸ್ಟೀಸ್ ಆಗಿದ್ದರು.