Wednesday, January 22, 2025
ಸುದ್ದಿ

ಗುಂಡೂರಾವ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ಪೋಸ್ಟ್ ಹಾಕಿದವನ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಶ್ಲೀಲ ಮಾತುಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಬಂಧಿತ ವ್ಯಕ್ತಿಯಾಗಿದ್ದಾನೆ. ದಿನೇಶ್ ಗುಂಡೂರಾವ್ ಹಾಗೂ ಅವರ ಸಮುದಾಯಕ್ಕೆ ಅವಮಾನವಾಗುವ ರೀತಿಯಲ್ಲಿ ಮಲ್ಲಿಕಾರ್ಜುನ ಪೋಸ್ಟ್ ಹಾಕಿದ್ದಾನೆ. ಅಲ್ಲದೇ, ದಿನೇಶ್ ಗುಂಡೂರಾವ್ ಅವರ ಪತ್ನಿಯ ಬಗ್ಗೆಯೂ ಅಶ್ಲೀಲ ಮಾತುಗಳಿಂದ ನಿಂದಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಭವ್ಯ ಅನು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ಮಲ್ಲಿಕಾರ್ಜುನನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು