Wednesday, January 22, 2025
ಸುದ್ದಿ

ಎಫ್.ಡಿ.ಎ, ಎಸ್.ಡಿ.ಎ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಮಾ.31 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್, ಲಘು ವ್ಯವಹಾರಗಳ ನ್ಯಾಯಾಲಯ, ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಖಾಲಿ ಇರುವ 269 ಪ್ರಥಮ ದರ್ಜೆ ಸಹಾಯಕರು, 575 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ.

ನ್ಯಾಯಾಂಗ ಇಲಾಖೆಯ ಎಫ್.ಡಿ.ಎ. ಮತ್ತು ಎಸ್.ಡಿ.ಎ. ಹುದ್ದೆಗಳ ನೇಮಕಾತಿ ಸಂಬಂಧ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆಯಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಈ ಕಾರಣಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು 2 ಬಾರಿ ವಿಸ್ತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೊದಲು ಅರ್ಜಿ ಸಲ್ಲಿಕೆಗೆ ಮಾರ್ಚ್ 12 ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಸಾಧ್ಯವಾಗದ ಕಾರಣ ಮಾರ್ಚ್ 20 ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ವರ್ ದೋಷ ಸರಿಪಡಿಸಲು ಆಗದ ಕಾರಣ ಅರ್ಜಿ ಸಲ್ಲಿಕೆಗೆ ತೊಂದರೆಯಾಗಿದೆ ಎಂಬ ದೂರು ಕೇಳಿ ಬಂದಿವೆ. ಹಾಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ. ಮಾರ್ಚ್ 31 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 1 ಪರೀಕ್ಷಾ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ ಎಂದು ಹೇಳಲಾಗಿದೆ.