Saturday, November 23, 2024
ಸುದ್ದಿ

ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರನ್ನು ಎನ್‍ಕೌಂಟರ್ ಮಾಡಿ ಕೊಲ್ಲಬೇಕು ಎಂದವನನ್ನು ಬಂಧಿಸಿದ ಪೋಲಿಸರು – ಕಹಳೆ ನ್ಯೂಸ್

ಮಂಗಳೂರು: ಪುತ್ತೂರು ಸಮೀಪದ ಕೂರ್ನಡ್ಕ ನಿವಾಸಿಯಾದ ಹಕೀಂ ಸೌದೀ ಅರೇಬಿಯಾದಲ್ಲಿದ್ದು, ನಿನ್ನೆ ಮಂಗಳೂರಿಗೆ ಬಂದಿಳಿಯುವಾಗ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿಯವರನ್ನು ಎನ್‍ಕೌಂಟರ್ ಮಾಡಿ ಕೊಲ್ಲಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಬಿಡುಗಡೆ ಮಾಡಿದ್ದ ಆರೋಪಿ ಹಕೀಂ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಜನಾರ್ದನ ಪೂಜಾರಿಯವರು ಕುದ್ರೋಳಿ ದೇವಸ್ಥಾನದಲ್ಲಿ ಡಿಸೆಂಬರ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಹಕೀಂ ತಾನೋರ್ವ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೊಂಡು ರಾಮ ಮಂದಿರದ ಪರ ಹೇಳಿಕೆ ನೀಡಿದ ಪೂಜಾರಿಯವರನ್ನು ಎನ್‍ಕೌಂಟರ್ ಮಾಡಬೇಕು, ಗಡಿಪಾರು ಮಾಡಬೇಕು ಎಂದು ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಜೆ.ಆರ್. ಲೋಬೊ ಸಹಿತ ಹಲವರು ಅಂದಿನ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಗೆ ಮನವಿ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಮಂಗಳೂರು ಸೈಬರ್ ಠಾಣೆ ಸಹಿತ ಹಲವೆಡೆ ಆರೋಪಿ ಹಕೀಂ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸರು ಆಡಿಯೋವನ್ನು ಪರಿಶೀಲಿಸಿ, ವಿಚಾರಣೆ ನಡೆಸಿ ಆರೋಪಿ ವಿದೇಶದಲ್ಲಿರುವುದನ್ನು ಪತ್ತೆ ಹಚ್ಚಿದ್ದರು. ಅಲ್ಲದೆ ಆತನ ಬಂಧನಕ್ಕೆ ಬಲೆ ಬೀಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಆರೋಪಿ ಹಕೀಂ ಮಂಗಳೂರಿಗೆ ಬಂದಿಳಿದ ಸಂದರ್ಭ ಆತನನ್ನು ಬಂಧಿಸಿದ್ದಾರೆ.