Wednesday, January 22, 2025
ಸುದ್ದಿ

ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಗುಂಡಿನ ಕಾಳಗ: ಐವರು ಉಗ್ರರು ಹತ – ಕಹಳೆ ನ್ಯೂಸ್

ಶ್ರೀನಗರ: ಕಾಶ್ಮೀರ ಕಣವೆಯಲ್ಲಿ ಭಯೋತ್ಪಾದಕರ ಬೇಟೆಯನ್ನು ಭಾರತೀಯ ಸೇನಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ನಡೆದ ಗುಂಡಿನ ಕಾಳಗದಲ್ಲಿ ಐವರು ಉಗ್ರರು ಹತರಾಗಿ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಗುಂಡೇಟಿನಿಂದ ಕೆಲವು ಸೇನಾಸಿಬ್ಬಂದಿ ಗಾಯಗೊಂಡಿದ್ದಾರೆ. ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಒಟ್ಟು ಐವರು ಉಗ್ರಗಾಮಿಗಳು ಹತರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಡಿಪೋರಾ ಜಿಲ್ಲೆ ಹಜಿನ್ ಪ್ರದೇಶದಲ್ಲಿ ರಾತ್ರಿಯಿಡಿ ಯೋಧರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾದರು. ಮೃತ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುಂಡಿನ ಚಕಮಕಿ ಸಂದರ್ಭದಲ್ಲಿ ಉಗ್ರಗಾಮಿಗಳು ಒತ್ತೆಯಲ್ಲಿಟ್ಟುಕೊಂಡಿದ್ದ ಇಬ್ಬರು ನಾಗರಿಕರನ್ನು ಯೋಧರು ರಕ್ಷಿಸಿದ್ಧಾರೆ. ಇನ್ನೊಂದು ಮೂಲದ ಪ್ರಕಾರ ಒತ್ತೆಯಲ್ಲಿದ್ದ ಬಾಲಕನೊಬ್ಬ ಕಾರ್ಯಾಚರಣೆ ಸಂದರ್ಭದಲ್ಲಿ ಹತನಾಗಿದ್ದಾನೆ.

ಶೋಪಿಯಾನ್‍ನಲ್ಲಿ ನಡೆದ ಮತ್ತೊಂದು ಗುಂಡಿನ ಕಾಳಗದಲ್ಲಿ ಇನ್ನಿಬ್ಬರು ಉಗ್ರರು ಹತರಾಗಿದ್ದು, ರೈಫಲ್‍ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಆರು ಯೋಧರಿಗೂ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.