Monday, January 20, 2025
ಸುದ್ದಿ

ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ಭಾರತದಿಂದ ಪರಾರಿ: ವಂಚಕನ ಬಂಧನ – ಕಹಳೆ ನ್ಯೂಸ್

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಭಾರತದಿಂದ ಪರಾರಿಯಾಗಿ ಲಂಡನ್ ನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ನೀರವ್ ಮೋದಿಯನ್ನು ಅಲ್ಲಿನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯದ ಆದೇಶದ ಮೇರೆಗೆ ಬಂಧಿಸಿ ಜೈಲಿಗಟ್ಟಲಾಗಿದೆ. ಆತನನ್ನು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆ ನಡೆಯುತ್ತಿರುವ ಮಧ್ಯೆ ಈಗ ಮತ್ತೊಬ್ಬ ವಂಚಕನ ಬಂಧನವಾಗಿದೆ.

ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳಿಗೆ 8100 ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಸ್ಟರ್ಲಿಂಗ್ ಬಯೋಟೆಕ್ ಗ್ರೂಪ್ ಪಾಲುದಾರ ಹಿತೇಶ್ ಪಟೇಲ್ ಎಂಬಾತನನ್ನು ಯುರೋಪಿನ ಟಿರಾನಾ ದೇಶದ ಅಲ್ಬೇನಿಯಾದಲ್ಲಿ ಬಂಧಿಸಲಾಗಿದೆ. ಈತನ ಬಂಧನಕ್ಕಾಗಿ ಮಾರ್ಚ್ 11ರಂದು ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿತೇಶ್ ಪಟೇಲ್ ಪಾಲುದಾರಿಕೆಯ ಸ್ಟರ್ಲಿಂಗ್ ಬಯೋಟೆಕ್ ಗ್ರೂಪ್, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಾದ ಯುಕೋ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ ಹಾಗೂ ಆಂಧ್ರ ಬ್ಯಾಂಕ್ ಗಳಲ್ಲಿ 4700 ಕೋಟಿ ರೂಪಾಯಿ ಸಾಲ ಮಾಡಿದ್ದು, ಇದು ಈಗ 8100 ಕೋಟಿ ರೂಪಾಯಿಗೆ ತಲುಪಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಳಿಕ ಹಿತೇಶ್ ಪಟೇಲ್ ಕುಟುಂಬ ಸಮೇತ ವಿದೇಶಕ್ಕೆ ಪರಾರಿಯಾಗಿದ್ದು, ಇದೀಗ ಬಂಧನಕ್ಕೊಳಗಾಗಿರುವ ಆತನನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಕ್ರಿಯೆ ನಡೆಸಲಾಗುತ್ತಿದೆ.