Monday, January 20, 2025
ಸುದ್ದಿ

ಹೋಳಿ ಆಚರಣೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ – ಕಹಳೆ ನ್ಯೂಸ್

ಹೈದರಾಬಾದ್: ಹೈದರಾಬಾದ್ ನಲ್ಲಿ ಹೋಳಿ ಹಬ್ಬ ಆಚರಿಸುವ ಸಂದರ್ಭದಲ್ಲಿಯೇ ಆಘಾತಕಾರಿ ಘಟನೆಯೊಂದು ನಡೆದಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಯುವಕನನ್ನು ಬಂಧಿಸಲಾಗಿದೆ ಎಂದು ಬಾಲಾನಗರ ಡಿಸಿಪಿ ಪಿ.ವಿ. ಪದ್ಮಜ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಹಾರ ಯುವಕ ಹೋಳಿ ಆಚರಣೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ವಿಚಾರಣೆ ಸಂದರ್ಭದಲ್ಲಿ ಕೃತ್ಯವನ್ನು ಆರೋಪಿ ಒಪ್ಪಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಲೆಗೆ ಬಳಸಲಾದ ಆಯುಧವನ್ನು ಜಪ್ತಿ ಮಾಡಲಾಗಿದೆ. ಈತ 2 ತಿಂಗಳ ಹಿಂದೆ ಹೈದರಾಬಾದ್ ಗೆ ಬಂದು ಸಂಬಂಧಿಕರೊಂದಿಗೆ ವಾಸಿಸುತ್ತಿದ್ದ ಎಂದು ತಿಳಿಸಿದ್ದಾರೆ.

ಬಾಲಕಿಯ ತಂದೆ ಮಾರ್ಚ್ 21 ರ ರಾತ್ರಿ ದೂರು ನೀಡಿದ್ದು, ಹೋಳಿ ಆಚರಣೆಗೆ ಹೋಗಿದ್ದ ಮಗಳು ಮನೆಗೆ ಬಂದಿಲ್ಲ. ಎಂದು ತಿಳಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಯುವಕನ ಕೃತ್ಯ ಬಯಲಿಗೆ ಬಂದಿದೆ.