Recent Posts

Monday, January 20, 2025
ಸಿನಿಮಾಸುದ್ದಿ

ದರ್ಶನ್ ಮನೆಗೆ ಕಲ್ಲು ತೂರಾಟ; ಕಾರಣವೇನು ಗೊತ್ತಾ..? – ಕಹಳೆ ನ್ಯೂಸ್

ಬೆಂಗಳೂರು: ನಗರದ ರಾಜ ರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್‍ನಲ್ಲಿರುವ ನಟ ದರ್ಶನ್ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಕಾರು ಜಖಂಗೊಂಡಿದೆ. ಮೊನ್ನೆಯಷ್ಟೇ ಸುಮಲತಾ ಅಂಬರೀಷ್ ಅವರನ್ನು ಬೆಂಬಲಿಸಿದ್ದಕ್ಕಾಗಿ ದರ್ಶನ್ ಮತ್ತು ಯಶ್‍ರನ್ನು ಗುರಿಯಾಗಿಸಿಕೊಂಡು ಹಲವರು ಟೀಕೆ ಮಾಡಿದ್ದರು.

ಇದೇ ಹಿನ್ನಲೆಯಲ್ಲಿ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ದುರ್ಷರ್ಮಿಯೊಬ್ಬ ದರ್ಶನ್ ಮನೆ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು, ಕೆಂಗೇರಿ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗೆ ರಾಜರಾಜೇಶ್ವರಿ ನಗರ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು