Sunday, January 19, 2025
ರಾಜಕೀಯಸುದ್ದಿ

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ `ಉಮಾಭಾರತಿ’ ನೇಮಕ – ಕಹಳೆ ನ್ಯೂಸ್

ನವದೆಹಲಿ: 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬೆನ್ನಲ್ಲೇ ಕೇಂದ್ರ ಸಚಿವೆ ಉಮಾಭಾರತಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.

ಕೇಂದ್ರ ಸಚಿವ ಉಮಾಭಾರತಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ ಎಂದು ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ತಿಳಿಸಿದ್ದಾರೆ. ಉಮಾಭಾರತಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಹೇಳಿದ್ದರು. ಹಾಗಾಗಿ ಉಮಾಭಾರತಿ ಅವರಿಗೆ ಬಿಜೆಪಿ ಹೊಸ ಜವಾಬ್ದಾರಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು