Recent Posts

Monday, January 20, 2025
ರಾಜಕೀಯಸುದ್ದಿ

ಬೈಲಹೊಂಗಲದ ಮಾಜಿ ಶಾಸಕ ಜಗದೀಶ್ ಮೆಟಗುಡ್ ಮರಳಿ ಬಿಜೆಪಿಗೆ – ಕಹಳೆ ನ್ಯೂಸ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಜಗದೀಶ್ ಮೆಟಗುಡ್ ಇಂದು ಮರಳಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಡವಳಗಿರಿಯಲ್ಲಿ ಬಿಎಸ್.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲ ವರ್ಷಗಳ ಹಿಂದೆ ಬೈಲಹೊಂಗಲದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು ನಂತರ ಯಡಿಯೂರಪ್ಪನವರು ಕೆ.ಜೆ.ಪಿ ಪಕ್ಷದಿಂದ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ನಂತರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೆಟಗುಡ್ ಮತ್ತೆ ಸೋಲನ್ನನುಭವಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಎಲ್ಲ ಕಾರಣಗಳಿಂದ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ಮೆಟಗುಡ್ ಲೋಕಸಭಾ ರಣಕಣ ರಂಗು ಪಡೆಯುತ್ತಿದ್ದಂತೆ ಇಂದು ಮರಳಿ ಬಿಜೆಪಿ ಸೇರ್ಪಡೆ ಆಗಿದ್ದಾರೆ.