Monday, January 20, 2025
ಸುದ್ದಿ

ಮೇ. 1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮೇ 1 ರಿಂದ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2013 ರಿಂದಲೇ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪದ್ಧತಿ ಜಾರಿಗೆ ತರಲಾಗಿದೆ. ಆದರೆ, ಹಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಸಾಧನ ಅಳವಡಿಸಿರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲವು ಸಿಬ್ಬಂದಿಯ ವಿಳಂಬದ ಕಾರಣದಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಮೇ 1 ರಿಂದ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ.