ನಾಮಪತ್ರ ಸಲ್ಲಿಸಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ. ಮೈಸೂರು ಬ್ಯಾಂಕ್ ವೃತ್ತದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಡಿವಿಎಸ್ಗೆ ಬಿಜೆಪಿ ನಾಯಕರು ಬೆಂಬಲ ನೀಡಿದರು.
ತೆರೆದ ವಾಹನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಡಿ.ವಿ ಸದಾನಂದಗೌಡ ಕಳೆದ ಐದು ವರ್ಷ ನಿಮ್ಮ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡಿರುವೆ.
ಈ ಬಾರಿ ಮತ್ತೊಮ್ಮೆ ಅವಕಾಶ ನೀಡಿ ಅಂತಾಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮನವಿ ಮಾಡಿದರು.