ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ ಲೋಕಸಭಾ ಚುನಾವಣೆಯು ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 18ರಂದು ಮೊದಲ ಹಂತ ಹಾಗೂ ಏಪ್ರಿಲ್ 23ರಂದು ಎರಡನೇ ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆಯುತ್ತಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂಬ ಕಾರಣಕ್ಕೆ ಅಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೂ ಸಹ ಅಂದು ವೇತನ ಸಹಿತ ರಜೆ ನೀಡಲಾಗುತ್ತದೆ.