ಬ್ಯಾಂಕಾಕ್: ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮತ ಎಣಿಕೆ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ನಕಲಿ ಮತ ಪತ್ರಗಳನ್ನು ಸೇರಿಸಲಾಗಿದೆ. ಈ ಮೂಲಕ ಇಬ್ಬರು ಚುನಾವಣಾ ಅಧಿಕಾರಿಗಳು ಲೂಟಿ ಮಾಡತೊಡಗಿದ್ದಾರೆ ಎಂದು ಬಂಧಿತ ಆರೋಪಿಗಳು ಫೇಸ್ ಬುಕ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಈ ಬಗ್ಗೆ ಮಾಹಿತಿ ಕಲೆ ಹಾಕಿದ ಥಾಯ್ಲೆಂಡ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸುಳ್ಳು ಸುದ್ದಿ ಹರಿ ಬಿಟ್ಟಿರುವುದು ಗೊತ್ತಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಥಾಯ್ಲೆಂಡ್ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದು, ಸುಳ್ಳು ಸುದ್ದಿ ಎಂಬುದು ತಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಕಂಪ್ಯೂಟರ್ ಅಪರಾಧ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ. 5 ವರ್ಷ ಜೈಲು ಶಿಕ್ಷೆ, 3,100 ಥಾಯ್ಲೆಂಡ್ ಡಾಲರ್ ದಂಡ ಪಾವತಿಸಬೇಕಿದೆ ಎಂದು ತಿಳಿಸಿದ್ದಾರೆ.