Saturday, November 23, 2024
ಸುದ್ದಿ

ಸುಪ್ರೀಂ ಕೋರ್ಟ್ ಕೈಗೊಂಡಿದೆ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ನಿಷೇಧ ಕಾಯ್ದೆ – ಕಹಳೆ ನ್ಯೂಸ್

ಹೆಣ್ಣು ಮಗು ಮನೆಯ ನಂದಾದೀಪ. ಅದನ್ನು ಸದಾ ಬೆಳಗಲು ಬಿಡಿಬೇಕು. ಒಂದು ಹೆಣ್ಣು ವಿದ್ಯೆ ಕಲಿತರೆ ಒಂದು ಊರೇ ಕಲಿತಂತೆ. ಮಗಳನ್ನು ಉಳಿಸಿ ಮಗಳನ್ನು ಕಲಿಸಿ ಅನ್ನೊ ಮಾತಿಗೆ ಇದೀಗ ಸುಪ್ರೀಂ ಕೋರ್ಟ್ ಹೆಣ್ಣು ಭ್ರೂಣಹತ್ಯೆಯ ಬಗ್ಗೆ ಕಟ್ಟಿ ನಿಟ್ಟಿನ ಕ್ರಮ ಕೈಗೊಂಡಿದೆ.

ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಆದೇಶ ನೀಡಬೇಕೆಂದು ಮಾಜಿ ಶಾಸಕ ಹಾಗೂ ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ ಸಾರ್ವಭೌಮ ಎಸ್ ಬಗಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನವರಾದ ಮಾಜಿ ಶಾಸಕ ಬಗಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ವಿಭಾಗೀಯ ಪೀಠದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್ ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ವಿಜಯಪುರ ಜಿಲ್ಲೆಯ ಉಪ ಆಯುಕ್ತರಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣಹತ್ಯೆಯ ಹೆಚ್ಚಳದ ಬಗ್ಗೆ ತಮ್ಮ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿರುವ ಅವರು, 2016 ರ ನವೆಂಬರ್ ೮ರಂದು ಸುಪ್ರೀಂ ಕೋರ್ಟ್ ಹೊರಡಿಸಿರುವ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದ ಸ್ತ್ರೀರೋಗ ತಜ್ಞರ ಕ್ಲಿನಿಕ್ ಗಳು ಮತ್ತು ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವ ಯಂತ್ರಗಳನ್ನು ಇಡಲು ಅನುಮತಿ ನೀಡದಂತೆ ಕಟ್ಟುನಿಟ್ಟಿನ ಆದೇಶವನ್ನು ಸರ್ಕಾರ ಜಾರಿಗೆ ತರಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.