Tuesday, January 21, 2025
ಸುದ್ದಿ

ಎಂ.ಡಿ.ಎಂ.ಎ ಮಾದಕ ವಸ್ತು ಮಾರಾಟ ಇಬ್ಬರು ಯುವಕರ ಬಂಧನ – ಕಹಳೆ ನ್ಯೂಸ್

ಮಂಗಳೂರು ನಗರದ ಸಿಸಿಬಿ ತಂಡ ಹಾಗೂ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯವರು ದಿನಾಂಕ 30-03-2019 ರಂದು ಮಂಗಳೂರು ನಗರದ ಪಿ.ವಿ.ಎಸ್ ವ್ರತ್ತದ ಬಳಿ ಡಿ.ಎಂ.ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯಂತೆ ಆರೋಪಿಗಳಾದ ಬಂಟ್ವಾಳದ ನೆತ್ತೆರಕೆರೆ ನಿವಾಸಿ ಜಾವದ್ ಹಾಗೂ ತೊಕೊಟ್ಟು ನಿವಾಸಿ ಬೆಂಗ್ರೆ ಶಾನ್ ನವಾಜ್‍ನನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಜಾವದ್‍ನ ವಶದಿಂದ 24 ಗ್ರಾಂ ತೂಕದ ಎಂ.ಡಿ.ಎಂ.ಎ ಪೌಡರ್, ಕೆ.ಟಿ.ಎಂ.ಡ್ಯೂಕ್ ಮೋಟಾರು ಸೈಕಲ್, ಡಿಜಿಟಲ್ ತೂಕದ ಯಂತ್ರ ಹಾಗೂ ಮೊಬೈಲ್ ಪೋನ್ ಮತ್ತು ಶಾನ್ ನವಾಜ್‍ನಿಂದ ಮೊಬೈಲ್ ಪೋನ್, ಒಟ್ಟು 2,20,100/- ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಸಂದೀಪ್ ಪಾಟೀಲ್ ಐ.ಪಿ.ಎಸ್ ರವರ ಆದೇಶದಂತೆ ಪೊಲೀಸ್ ಉಪ ಆಯುಕ್ತರು ಶ್ರೀ ಹನುಮಂತರಾಯ, ಐ.ಪಿ.ಎಸ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯರವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಆರ್.ಬಿ ಎಸಿಪಿ ವಿನಯ್ ಗಾಂವ್ಕರ್ ಹಾಗೂ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಹಾಗೂ ಹಾಗೂ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಣ ಕೆ.ಕೆ., ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.