Monday, January 20, 2025
ರಾಜಕೀಯಸುದ್ದಿ

ಸುಮಲತಾರವರು ಅಧಿಕಾರವಿಲ್ಲದೆಯೇ ದಬ್ಬಾಳಿಕೆ ನಡೆಸುತ್ತಿದ್ದಾರೆ- ಸಿಎಂ ಕುಮಾರಸ್ವಾಮಿ- ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಸುಮಲತಾರಿಗೆ ನಮ್ಮನ್ನು ಎದುರಿಸುವ ಶಕ್ತಿ ಇಲ್ಲ. ಅಧಿಕಾರವಿಲ್ಲದೆಯೇ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಎಚ್. ಡಿ. ದೇವೇಗೌಡ ಪರ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಸುಮಲತಾ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕುತಂತ್ರದ ಮೂಲಕ ಗೆಲ್ಲುವ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಧು ಸ್ವಾಮಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ನೀರಿಗಾಗಿ ಹೋರಾಟ ನಡೆಸುವಾಗ ಮಾಧುಸ್ವಾಮಿ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಆಗಲು ಕುಮಾರಸ್ವಾಮಿ ಆಯೋಗ್ಯರು ಎಂದು ಬಿಜೆಪಿಯ ಕೆ.ಎಸ್ ಈಶ್ವರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಯೋಗ್ಯರು, ಯಾರು ಆಯೋಗ್ಯರು ಎಂದು ಜನಸಾಮಾನ್ಯರಿಗೆ ಗೊತ್ತಿದೆ. ಬಿಜೆಪಿಯವರು ಸರ್ಟಿಫಿಕೇಟು ಕೊಡಬೇಕಾದ ಅಗತ್ಯ ಇಲ್ಲ ಎಂದರು.