Monday, January 20, 2025
ಸುದ್ದಿ

ವಾಹನ ಕಳವು ಪ್ರಕರಣದ ಆರೋಪಿಯ ಬಂಧನ – ಕಹಳೆ ನ್ಯೂಸ್

ಫೆ.06 ಮತ್ತು 7ರಂದು ಬೆಳಿಗ್ಗೆ 07-30 ಗಂಟೆಯ ನಡುವೆ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ರಿ) ರವರಿಗೆ ಸೇರಿದ ಕೆಎ-19-ಎಎ-5685 ನೇ 407 ಟೆಂಪೋ ದಕ್ಷಿಣ ಧಕ್ಕೆಯ ಮತ್ಸ್ಯಾ ಗಾಂಧಿ ಐಸ್ ಪ್ಲಾಟ್ ಮತ್ತು ಕೋಲ್ಡ್ ಸ್ಟೋರೆಜ್ ಎದುರು ನಿಲ್ಲಿಸಿದನ್ನು ವಾಹನವನ್ನುಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲಿಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಈ ಪ್ರಕರಣ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ವಾಹನ ಕಳವು ಪ್ರಕರಣದ ಆರೋಪಿ ಸುಳ್ಯದ ಕಿಶೋರ್ ಕುಮಾರ್ ಎಂಬಾತನನ್ನು ನಿನ್ನೆ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿ, ಕಳವಾದ ಸುಮಾರು 6,00,000/- ಮೌಲ್ಯದ 407 ಟೆಂಫೋವನ್ನು ಸ್ವಾಧೀನಪಡಿಸಿಕೊಳ್ಳಲಾಯಿತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪತ್ತೆ ಕಾರ್ಯ
ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಸಂದೀಪ್ ಪಾಟೀಲ್, ಐಪಿಎಸ್. ರವರ ನಿರ್ದೇಶನದಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀ ಹನುಮಂತರಾಯ, ಐಪಿಎಸ್ ಮಾನ್ಯ ಉಪ ಪೊಲೀಸ್ ಆಯುಕ್ತರಾದ (ಅಪರಾಧ ಮತ್ತು ಸಂಚಾರ) ಶ್ರೀಮತಿ ಉಮಾಪ್ರಶಾಂತ್, ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಕುಮಾರಾರಧ್ಯ ರವರು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪ ನಿರೀಕ್ಷಕರಾದ ರಾಜೇಂದ್ರ, ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ ಮಂಜುಳಾ.ಎಲ್ ಹಾಗೂ ಠಾಣಾ ಸಿಬ್ಬಂದಿಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು