Recent Posts

Wednesday, November 13, 2024
ಸುದ್ದಿ

ವಿವೇಕಾನಂದ ಕಾಲೇಜು: 2018-19ರ ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸುತ್ತದೆ. ಮನುಷ್ಯ ಸಂಬಂಧಗಳಿಗೆ ಇಲ್ಲಿ ಹೊಸ ತೆರೆಯನ್ನು ಕಾಣಬಹುದು. ಅಲ್ಲದೇ ಮುಂದಿನ ದಿನಗಳಲ್ಲಿ ಸಮಾಜ ಇಂತವಿದ್ಯಾರ್ಥಿಗಳಿಗೆ ನಾಯಕತ್ವದ ಗುಣವನ್ನು ಗುರುತಿಸಿ ಸಾಮಾನ್ಯ ಜನರೊಂದಿಗೆ ಬೆರೆಯುವುದನ್ನು ತಿಳಿಸಿಕೊಡುತ್ತದೆ. ಅಲ್ಲದೇ ಇಲ್ಲಿ ಸಮಾಜ ಸೇವೆಯತ್ತ ಸ್ವತಂತ್ರವಾಗಿ ತೊಡಗಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಮೂಡಂಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ್ ಕುಡ್ಲ ಹೇಳಿದರು.

ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಐಕ್ಯುಎಸಿ ಘಟಕದ ಜಂಟಿ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ ‘2018-19ರ ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎನ್‍ಎಸ್‍ಎಸ್‍ನಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ವಿದ್ಯಾರ್ಥಿಗಳಿಗೆ ಒಂದು ಕಾರ್ಯಕ್ರಮವನ್ನು ಹೇಗೆ ನಿರ್ವಹಿಸಬಹುದೆಂಬುವುದರ ಅರಿವು ಮೂಡುತ್ತದೆ. ಅಂತೆಯೇ ಮುಂದಿನ ಜೀವನದಲ್ಲಿ ತಾವು ಆಯ್ದುಕೊಂಡಿರುವ ಕ್ಷೇತ್ರದ ಬಗ್ಗೆ ಸ್ವತಂತ್ರವಾಗಿ ಅಧ್ಯಯನ ಮಾಡಲು ಈ ಯೋಜನೆ ಉಪಯುಕ್ತವಾಗುತ್ತದೆ. ಅವಕಾಶಗಳ ಕಡೆ ವಿದ್ಯಾರ್ಥಿಗಳನ್ನು ತೆರೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಬ್ಬನಿಗಿಂತ ಹೆಚ್ಚು ಜನ ಎಲ್ಲಿರುತ್ತಾರೋ ಅಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತದೆ. ಅಂತಹ ಸಮಯದಲ್ಲಿ ಒಂದೇ ರೀತಿ ಭಾವನೆಯನ್ನು ಎಲ್ಲರಲ್ಲಿ ಮೂಡಿಸಿ ನಾಯಕತ್ವದ ಗುಣ, ಹೊಂದಾಣಿಕೆಯ ಮನೋಭಾವವನ್ನು ಎನ್‍ಎಸ್‍ಎಸ್‍ನಂತಹ ಕಾರ್ಯಕ್ರಮಗಳು ಕಲಿಸಿಕೊಡುತ್ತವೆ. ಒಳ್ಳೆಯ ಕಾರ್ಯ ಯಾವಾಗಲೂ ಒಬ್ಬ ವ್ಯಕ್ತಿಯಿಂದ ಆರಂಭವಾಗುವಂತದ್ದು. ಸಮಾಜಮುಖಿ ಹಾಗೂ ಸಮಾಜ ಬದ್ಧತೆ ಕೆಲಸಕ್ಕೆ ನಮ್ಮನ್ನು ತೊಡಗಿಸಿಕೊಳ್ಳುವುದಕ್ಕೆ ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಬಹುಮಾನ ವಿತರಣೆ, ನೆನಪಿನ ಕಾಣಿಕೆ
ಕಾರ್ಯಕ್ರಮದಲ್ಲಿ ನಾಯಕತ್ವದ ಪ್ರಮಾಣಪತ್ರ, ಬೀಳ್ಕೊಡುವ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾರ್ಷಿಕ ಕ್ರೀಡಾಕೂಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.

 ಭೌತಶಾಸ್ತ್ರ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಜಯಂತ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ರೈ ಹಾಗೂ ಯೋಜನೆಯ ನಾಯಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಅನಿತಾ ಕಾಮತ್ ಸ್ವಾಗತಿಸಿ, ಸ್ವಯಂಸೇವಕಿ ದೀಕ್ಷಾ ವಂದಿಸಿದರು. ವಿದ್ಯಾರ್ಥಿನಿ ಗೀತಾ ಕಾರ್ಯಕ್ರಮ ನಿರೂಪಿಸಿದರು.