ಬೆಂಗಳೂರು: ಇನ್ನೆರಡು ದಿನಗಳಲ್ಲಿ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರವನ್ನು ಒಳಗೊಂಡ ಸಮಸ್ಯೆಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಜೆಡಿಎಸ್ ಪ್ರಣಾಳಿಕೆ ಇಡೀ ದೇಶಕ್ಕೆ ಮಾದರಿಯಾಗಲಿದೆ. ರಾಜ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವು 25 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರು ಜನರ ಭಾವನಾತ್ಮಕ ವಿಚಾರಗಳನ್ನು ಹಾಗೂ ದೇಶದ ಸೇನೆಯನ್ನು ಮುಂದಿಟ್ಟುಕೊಂಡು ಚುನಾವಣೆ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಮೈತ್ರಿ ಸರ್ಕಾರದಲ್ಲಿ ಇದ್ದ ಸಮಸ್ಯೆಗಳು ಪರಿಹಾರವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಒಟ್ಟಾಗಿ ಪ್ರಚಾರದಲ್ಲಿ ಭಾಗವಹಿಸಲಿದೆ ಎಂದರು.