ಗದಗ : ಲೋಕಸಭೆ ಚುನಾವಣೆಗೂ ಮುನ್ನವೇ ಬಿಜೆಪಿಗೆ ಮತ್ತೊಂದು ಶಾಕ್ ಆಗಿದ್ದು, ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಗದಗನಲ್ಲಿ ಕಾಂಗ್ರೆಸ್‍ನ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಗದಗ ಲಿಂಗಾಯತ ಪ್ರಭಾವಿ ನಾಯಕ ಹಾಗೂ ಬಿಜೆಪಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಶ್ರೀಶೈಲಪ್ಪ ಬಿದರೂರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಮಾತುಕತೆ ಮಾಡಿರುವ ಫೋಟೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶ್ರೀಶೈಲಪ್ಪ ಬಿದರೂರ ಅವರು ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ತಟಸ್ಥವಾಗಿ ಉಳಿದಿದ್ದರು. ಈಗ ಬಿಜೆಪಿ ಸೋಲಿಸಲು ಕಾಂಗ್ರೆಸ್ ಜೊತೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.